Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕೋಪಮಾಡಿಕೊಂಡ ಯುವಕ ವಾರಾಹಿ ನದಿಗೆ ಹಾರಿ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕೋಪಮಾಡಿಕೊಂಡ ಯುವಕನೋರ್ವ ಬಳ್ಳೂರು ಕಳುವಿನಬಾಗಿಲು ವಾರಾಹಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಬಳ್ಳೂರು ಗ್ರಾಮದ ಸ್ವಸ್ತಿಕ್ (21) ಆತ್ಮಹತ್ಯೆಗೆ ಶರಣಾದ ಯುವಕ.

ಸ್ವಸ್ತಿಕ್ 10 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಮನೆಯಲ್ಲಿಯೇ ಇದ್ದು ಸಣ್ಣ ಪುಟ್ಟ ವಿಚಾರಕ್ಕೆ ಕೋಪ ಮಾಡಿಕೊಳ್ಳುವ ಸ್ವಭಾವದವರಾಗಿದ್ದರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಆತನ ಅಜ್ಜಿ ತಾಯಿಗೆ ಬೊಂಡ ಕೊಟ್ಟು ಬರುವಂತೆ ಹೇಳಿದ್ದಕ್ಕೆ ಕೋಪಗೊಂಡು ಸೈಕಲ್ ತೆಗೆದುಕೊಂಡು ಹೋಗಿದ್ದು ವಾಪಾಸ್ಸು ಮನೆಗೆ ಬಂದಿರುವುದಿಲ್ಲ. ಸ್ವಸ್ತಿಕ್ ಎಲ್ಲಿಯಾದರೂ ಹೋಗಿರಬಹುದು ವಾಪಾಸ್ಸು ಬರಬಹುದು ಎಂದು ಮನೆಯವರು ಸುಮ್ಮನಿದ್ದರು. ಸ್ವಸ್ತಿಕ್ ನ ಮೃತದೇಹ ಬಳ್ಳೂರು ಕಳುವಿನಬಾಗಿಲು ವಾರಾಹಿ ಹೊಳೆಯಲ್ಲಿ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮನೆಯವರು ಹಾಗೂ ಇತರರು ಬಂದು ನೋಡಿ ಗುರುತಿಸಿದ್ದಾರೆ.

ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version