Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ ವಿಶ್ವ ದಾದಿಯರ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ಅವರ  ಜನ್ಮ ದಿನದ ಅಂಗವಾಗಿ ವಿಶ್ವ ದಾದಿಯರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ದಾದಿಯರ ದಿನದ ಪ್ರಯುಕ್ತ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೇಸಿಕ್ ಲೈಫ್ ಸಪ್ಪೋರ್ಟ್ ಮತ್ತು ಪ್ರಥಮ ಚಿಕಿತ್ಸಾ ತರಬೇತಿಯನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿ ಮೆಡಿಷುರ್ ಹೆಲ್ತ್ ಕೇರ್ ಅಕಾಡೆಮಿಯ ಡೈರೆಕ್ಟರ್ ಹಾಗೂ ಪ್ರಮಾಣಿತ ತರಬೇತುದಾರರಾದ ಡಾ. ಆಸಿಫ್ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ದಾದಿಯರ ದಿನಾಚರಣೆಯಂದು ದಾದಿಯರಿಗೆ ಪ್ರಾಮಾಣಿಕತೆ ಮತ್ತು ವಿನಮ್ರತೆಯು ಮುಖ್ಯ ಎಂದರು.

ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ಸಲಹೆಗಾರರಾದ ಚಂದ್ರಶೇಖರ್ ಅವರು ದಾದಿಯರ ದಿನದ ಮಹತ್ವವನ್ನು ಸಾರಿದರು. ವಿದ್ಯಾರ್ಥಿನಿಯಾದ ಆಯೇಷಾ ರಫೀದ ಕಾರ್ಯಕ್ರಮ ನಿರೂಪಿಸಿ, ಪ್ರಾಂಶುಪಾಲರಾದ ಜೆನಿಫರ್ ಫ್ರೀಡಾ ಮನೆಜಸ್ ಸ್ವಾಗತಿಸಿ, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ.ಎಸ್. ವಂದಿಸಿದರು.

Exit mobile version