Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಟಿಟಿ ವಾಹನ ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಗುಂಡ್ಮಿ ಪೆಟ್ರೋಲ್ ಬಂಕ್ ಎದುರುಗಡೆ ಸಾಸ್ತಾನ ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಟಿ ವಾಹನ ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ರವೀಂದ್ರ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಟಿಟಿ ವಾಹನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಬಗ್ಗೆ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಕೋಟ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version