Site icon Kundapra.com ಕುಂದಾಪ್ರ ಡಾಟ್ ಕಾಂ

ಸಿಎಸ್ಇಇಟಿ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿಎಸ್ಇಇಟಿ (ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

ಸಂಸ್ಥೆಯ ಭರವಸೆಯ ವಿದ್ಯಾರ್ಥಿಗಳಾದ  ಸನ್ವಿತಾ, ವಂಶಿ, ಕೆ.ವಿ.ಶರಣ್ಯ, ಪ್ರೇಕ್ಷಾ ಪೂಜಾರಿ, ನಾಗೇಂದ್ರ ಅವರು ಉತ್ತಮ ಅಂಕ ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ  ಅರ್ಹತೆಯನ್ನು ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version