Site icon Kundapra.com ಕುಂದಾಪ್ರ ಡಾಟ್ ಕಾಂ

ಹೊಳೆ ಹೂಳು ತೆರವುಗೊಳಿಸುವ ಸ್ಥಳಕ್ಕೆ ಶಾಸಕ ಎ. ಕಿರಣ್ ಕೊಡ್ಗಿ ಭೇಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಳೆ ಹೂಳು ಕಾಮಗಾರಿ ವೀಕ್ಷಣೆಗೆ ಆಗಮಿಸಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಭೇಟಿ ನೀಡಿ, ರೈತರ ಪರವಾಗಿ ನಿರಂತರ ಸ್ಪಂದಿಸುವುದಾಗಿ ತಿಳಿಸಿದ್ದರು.

ನೆರೆ ಹಾವಳಿಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿಗೆ ತೊಂದರೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇದಕ್ಕೆ ಶಾಶ್ವತ ಪರಿಹಾರದ ಬಗ್ಗೆ ಸರ್ಕಾರದಿಂದ ಅನುದಾನ ತರುವಲ್ಲಿ ಪ್ರಯತ್ನ ಚಾಲ್ತಿಯಲ್ಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೋಟ  ಗ್ರಾಮ ಪಂಚಾಯಿತಿ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತಿನ  ಅಭಿವೃದ್ಧಿ ಅಧಿಕಾರಿಗಳು, ಕೋಟ ಗ್ರಾಮ ಪಂಚಾಯಿತಿನ ಸದಸ್ಯರು, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪ್ರಗತಿಪರ ಕೃಷಿಕರು ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version