ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್. ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ‍್ಯಾಂಕ್ ಪಡೆದು ಶೈಕ್ಷಣಿಕ ಸಾಧನೆ ಮೆರೆದಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

