Site icon Kundapra.com ಕುಂದಾಪ್ರ ಡಾಟ್ ಕಾಂ

ಕರಾವಳಿ ಜಿಲ್ಲೆಗಳಲ್ಲಿ ಮೇ.17 ರಿಂದ 4 ದಿನಗಳ ಕಾಲ ಮಳೆ ಮುನ್ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸರಾಸರಿ 4.7 ಮೀ.ಮೀ ಮಳೆಯಾಗಿದ್ದು, ಈ ಪೈಕಿ ಕಾರ್ಕಳ ತಾಲೂಕಿನಲ್ಲಿ 5.7,  ಕುಂದಾಪುರ ತಾಲೂಕಿನಲ್ಲಿ 2.4, ಉಡುಪಿಯಲ್ಲಿ 11.4, ಬೈಂದೂರು ತಾಲೂಕಿನಲ್ಲಿ 1.0, ಬ್ರಹ್ಮಾವರ ತಾಲೂಕಿನಲ್ಲಿ 7.4, ಕಾಪು ತಾಲೂಕಿನಲ್ಲಿ 8.0, ಹೆಬ್ರಿ ತಾಲೂಕಿನಲ್ಲಿ 3.6 ಮಿ.ಮೀ ಮಳೆಯಾಗಿದೆ.

ಹವಾಮಾನ ಇಲಾಖೆ ವರದಿಯಂತೆ ಮೇ.17 ರಿಂದ 21ರತನಕ ಮಳೆ, ಮೇ 20 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

Exit mobile version