Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‌ನಿಂದ ಸಹಾಯಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಶೇಕಡಾ 95 ಕ್ಕಿಂತ ಅಧಿಕ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಸಹಾಯಧನ ನೀಡಲಾಗುತ್ತದೆ.

ಕುಂದಾಪುರ ತಾಲೂಕಿನ ವಿದ್ಯಾರ್ಥಿಗಳು ಕುಂದಾಪುರದ ವೆಸ್ಟ್ ಬ್ಲಾಕ್ ರಸ್ತೆಯ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿರುವ ’ಕುಂದಪ್ರಭ’ಕಛೇರಿಯಿಂದ ಅರ್ಜಿ ಮೇ 21 ರಿಂದ ಪಡೆದು ಅಂಕಪಟ್ಟಿಯೊಂದಿಗೆ, ಕಾಲೇಜು ಸೇರ್ಪಡೆಗೊಂಡ ದಾಖಲಾತಿ ಅಥವಾ ಶುಲ್ಕ ಪಾವತಿ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 31-05-025.

ಎಸ್. ಎಸ್. ಎಲ್. ಸಿ. ಹಾಗೂ ಪಿಯಸಿಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ರ್ಯಾಂಕ್‌ ಪಡೆದ ವಿದ್ಯಾರ್ಥಿಗಳು ಪ್ರಾಂಶುಪಾಲರ ಪತ್ರದೊಂದಿಗೆ ದಾಖಲೆ ಒದಗಿಸಿದ್ದಲ್ಲಿ ಅವರನ್ನು ಗೌರವಿಸಲಾಗುತ್ತದೆ. ಮಂಗಳೂರು ವಿ. ವಿ. ಯಿಂದ ಪದವಿ ಪರೀಕ್ಷೆಯಲ್ಲಿ ರ್ಯಾಂಕ್‌ ಪಡೆದವರೂ ಮಾಹಿತಿ ನೀಡಬಹುದು ಎಂದು ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‌ನ ಕಾರ್ಯದರ್ಶಿ ಯು. ಎಸ್. ಶೆಣೈ ತಿಳಿಸಿದ್ದಾರೆ.

Exit mobile version