Site icon Kundapra.com ಕುಂದಾಪ್ರ ಡಾಟ್ ಕಾಂ

ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕಕ್ಕೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ ನಾಲ್ವರು ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ.

ಮಲ್ಪೆ ಕರಾವಳಿ ಕಾವಲು ಪೊಲೀಸ್ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್ಸ್‌ಟೇಬಲ್ ಸಂತೋಷ್ ಗುಲ್ವಾಡಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

Exit mobile version