ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರದಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರುಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರುಗಳು ಭಾಗವಹಿಸಿರುತ್ತಾರೆ.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ರವಿಚಂದ್ರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

