Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: 200 ಚೀಲದ ಸಿಪ್ಪೆ ಅಡಿಕೆ ಕಳವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಗೋಡಾನ್‌ನಲ್ಲಿ ಇರಿಸಲಾದ ಸಾವಿರಾರು ರೂ. ಮೌಲ್ಯದ ಅಡಿಕೆ ತುಂಬಿದ ಚೀಲಗಳನ್ನು ಕಳ್ಳರುಕಳವು ಮಾಡಿರುವ ಘಟನೆ ಇಲ್ಲಿನ ಯಡ್ತರೆ ಗ್ರಾಮದ ಹಡಿನಗದ್ದೆ ಎಂಬಲ್ಲಿ ನಡೆದಿದೆ.

ಮಸೂದ್ ಪಟೇಲ್ ಎಂಬವರು ಸುಮಾರು 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಪ್ಯಾಸ್ಟಿಕ್ ಚೀಲದಲ್ಲಿ ಹಾಕಿ ಚೀಲ ಮಾಡಿ ಗೋಡೌನ್‌ನಲ್ಲಿ ಇಟ್ಟಿದ್ದು, ಮೇ. 15ರಿಂದ ಮೇ. 22ರ ಮಧ್ಯಾವದಿಯಲ್ಲಿ ಗೋಡೌನ್ ಬೀಗ ಮುರಿದು ಒಳನುಗ್ಗಿದ ಕಳ್ಳರು, 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version