ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ, ರಾಜ್ಯ ಮಾಜಿ ಆಯುಕ್ತರು, ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಕರ್ನಾಟಕ ಸರಕಾರ ಇವರಿಂದ ವಿಶೇಷ ಪ್ರೇರಣಾ ಉಪನ್ಯಾಸ ಕಾರ್ಯಕ್ರಮವು ಮೇ. 26 ಸೋಮವಾರದಂದು ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಅವರು ವಹಿಸಲಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ಸಿ.ಎ ನಾಗರಾಜ್ ಆಚಾರ್ಯ, ಲೆಕ್ಕ ಪರಿಶೋಧಕರು ಮತ್ತು ಕಾನೂನು ತಜ್ಞರು ಬೆಂಗಳೂರು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ಕಾರ್ಯಕ್ರಮದಲ್ಲಿ ಉಪಸ್ಥಿತರಲಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

