Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ  ಅರ್ಹ ವಿದ್ಯಾರ್ಥಿಗಳಿಂದ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿನಿಲಯದ ವಿವರ: ಉಡುಪಿ ತಾಲೂಕಿನ ಕುಂಜಿಬೆಟ್ಟು, ಕಾಪು ತಾಲೂಕಿನ ಪಡುಬಿದ್ರಿ, ಬ್ರಹ್ಮಾವರ ತಾಲೂಕಿನ ಯಡ್ತಾಡಿ ಹಾಗೂ ಕೂರಾಡಿ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಉಡುಪಿ ತಾಲೂಕು ಬನ್ನಂಜೆ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ಯಡ್ತಾಡಿ ಹಾಗೂ ಕೂರಾಡಿ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಉಡುಪಿ ತಾಲೂಕು 76 ಬಡಗಬೆಟ್ಟು ಹಾಗೂ ಉಡುಪಿ ಟೌನ್ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಉಡುಪಿ ತಾಲೂಕು ಬನ್ನಂಜೆ ಹಾಗೂ ಉಡುಪಿ ಟೌನ್‌ನ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2528884, ಮೊ.ನಂ: 9480843209 ಅಥವಾ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version