Site icon Kundapra.com ಕುಂದಾಪ್ರ ಡಾಟ್ ಕಾಂ

ಫುಟ್ಬಾಲ್ ಪಂದ್ಯಾಟ: ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ವಿಜೇತ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹಿಮೇಶ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: STAIRS ನ್ಯಾಶನಲ್  ಗೇಮ್ಸ್ – 2025 ಅವರು ಮೇ. 19 ರಿಂದ ಮೇ.22ರ ತನಕ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣ ನವದೆಹಲಿಯಲ್ಲಿ ಆಯೋಜಿಸಿದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್ ಕರ್ನಾಟಕ ತಂಡದಿಂದ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮೆರೆದಿದ್ದಾನೆ.

ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಬೋಧಕ – ಬೋಧಕೇತರ  ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Exit mobile version