ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಜಿ. ಎಸ್. ವಿ. ಅಸೋಸಿಯೇಶನ್ ವತಿಯಿಂದ ನಡೆಸಲ್ಪಡುತ್ತಿರುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಶಾಲೆ ಮತ್ತು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನ, ಉತ್ತಮ ಆರೋಗ್ಯ ಮತ್ತು ಸ್ಪೋಕನ್ ಇಂಗ್ಲೀಷ್ ಬಗ್ಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಜಿ. ಎಸ್. ವಿ. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪಿ. ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಾಂಟೆಸರಿ ಮತ್ತು ಯೋಗ ತರಬೇತಿದಾರೆ ಬೆಂಗಳೂರಿನ ಜಯಶ್ರೀ ಮೃತ್ಯುಂಜಯ್ ಅವರು ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನ, ಉತ್ತಮ ಆರೋಗ್ಯ ಮತ್ತು ಸ್ಪೋಕನ್ ಇಂಗ್ಲೀಮ್ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು.

ಸರಸ್ವತಿ ವಿದ್ಯಾ ಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಜಿ. ಎಸ್. ವಿ. ಅಸೋಸಿಯೇಶನ್ ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸದಸ್ಯ ಎಂ. ನಾಗೇಂದ್ರ ಪೈ, ಮೂರು ವಿದ್ಯಾಸಂಸ್ಥೆಗಳ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್, ಗೋಪಾಲ್ ದೇವಾಡಿಗ ಮತ್ತು ವಿಶ್ವನಾಥ್ ಭಟ್ ಉಪಸ್ಥಿತರಿದ್ದರು.