Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಗೇಮ್ಸ್ ಫೆಸ್ಟ್ – ಕ್ರೀಡಾ ಸಾಧಕರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ 2024 – 25ನೇ ಶೈಕ್ಷಣಿಕ ಸಾಲಿನಲ್ಲಿ ತರಗತಿವಾರು ಆಯೋಜಿಸಿದ ವಿವಿಧ ಪಂದ್ಯಾಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾ ತಂಡವನ್ನು ಪ್ರತಿನಿಧಿಸಿದ ಸಾಧಕರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ, ಪ್ರಾಕ್ತನ ವಿದ್ಯಾರ್ಥಿ ದೀಕ್ಷಿತ್ ಮೇಸ್ತ ಮಾತನಾಡಿ, ಒಬ್ಬ ಒಳ್ಳೆಯ ಕ್ರೀಡಾಪಟು ಶಿಸ್ತು ಮತ್ತು ಪರಿಶ್ರಮವನ್ನು ಮೈಗೂಡಿಸಿಕೊಳ್ಳಬೇಕು. ಸತತ ಪ್ರಯತ್ನದಿಂದ ಕ್ರೀಡೆಯಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದರು. ಇದೇ ಸಂದರ್ಭ ವಿವಿಧ ದೃಷ್ಟಾಂತಗಳ ಮೂಲಕ ಕೆಲವು ಕ್ರೀಡಾ ಸಾಧಕರ ಸಾಧನೆಯ ಹಾದಿಯನ್ನು ಪರಿಚಯಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಿ.ವಿ. ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನ ಕ್ರೀಡಾ ಸಾಧಕರನ್ನು ಸನ್ಮಾನಿಸಿ, ಶುಭ ಹಾರೈಸಿದರು.

ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್. ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಸುಹಾಸ್ ಮಲ್ಯ ಪ್ರಾರ್ಥಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮಾಲತಿ ಕಾರ್ಯಕ್ರಮ ನಿರೂಪಿಸಿದರು,

Exit mobile version