Site icon Kundapra.com ಕುಂದಾಪ್ರ ಡಾಟ್ ಕಾಂ

ಪಂಚವರ್ಣದಿಂದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನಕ್ಕೆ ಚಾಲನೆ

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ನಾವು ವಾಸಿಸುವ ವ್ಯಾಪ್ತಿಯಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ನಡೆಯಬೇಕು ಆಗ ಪರಿಸರದ ಸಮತೋಲನ ಸಾಧ್ಯ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಪರಿಸರಪ್ರೇಮಿ ಕೆ. ಜಗದೀಶ ನಾವಡ ಅಭಿಪ್ರಾಯಪಟ್ಟರು.

ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸುವರ್ಣ ಎಂಟರ್‌ಪ್ರೈಸೆಸ್ ಬ್ರಹ್ಮಾವರ, ಸಮುದ್ಯತಾ ಗ್ರೂಪ್ಸ್ ಕೋಟ, ಮಣೂರು ಫ್ರೆಂಡ್ಸ್, ಸ್ನೇಹಕೂಟ ಮಣೂರು, ಹಂದಟ್ಟು ಮಹಿಳಾ ಬಳಗ ಕೋಟ ಇವರ ಸಹಯೋಗದೊಂದಿಗೆ ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಂಯೋಜನೆಯೊಂದಿಗೆ 257ನೇ ವಾರದ ಪರಿಸರಸ್ನೇಹಿ ಹಸಿರು ಜೀವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕಳೆದ ಸಾಕಷ್ಟು ವರ್ಷಗಳಿಂದ ವಾತಾರಣದಲ್ಲಿ ವ್ಯತ್ಯಾಸಗಳನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣ ಪರಿಸರಸಲ್ಲಿರುವ ಮರಗಳ ಮಾರಣಹೋಮ ಈ ದಿಸೆಯಲ್ಲಿ  ಪರ್ಯಾಯವಾಗಿ ಮೂರು ಪಟ್ಟು ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ನಡೆದರೆ ನಮ್ಮಗೆ ಬೇಕಾದ ಪರಿಶುದ್ಧ ಗಾಳಿ ವಾತಾವರಣದಲ್ಲಿ ಸಮತೋಲ ಕಾಯ್ದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರಯೊಬ್ಬರು ಪರಿಸರದ ಬಗ್ಗೆ ಚಿಂತಿಸಿ ಗಿಡಮರಗಳನ್ನು ಬೆಳಸುವಂತ್ತಾಗಬೇಕು. ಅಲ್ಲದೆ ಪಂಚವರ್ಣ ಸಂಘಟನೆ ನಿರಂತರ ಪರಿಸರ ಕಾಳಜಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದೆ ಎಂದರು.

ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಮಾಲಿಕರಾದ ಮಧುಸೂದನ ಹೇರೂರು ಪರಿಸರ ಜಾಗೃತಿ ಮರಗಳ ಮಹತ್ವವನ್ನು ತಿಳಿಸಿದರು.

ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಜಾನಕಿ ಹಂದೆ ಪರಿಸರದವರಿಗೆ ಗಿಡ ವಿತರಿಸಿ ಜಾಗೃತಿ ಮೂಡಿಸಿದರು.

ಕೋಟತಟ್ಟು ಗ್ರಾ.ಪಂ ಸದಸ್ಯ ಪ್ರಕಾಶ್ ಹಂದಟ್ಟು, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾಮಂಡಲದ ನಿಕಟಪೂರ್ವ ಅಧ್ಯಕ್ಷೆ ಲಲಿತಾ ಪೂಜಾರಿ, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ರತ್ನಾ ಪೂಜಾರಿ ಉಪಸ್ಥಿತರಿದ್ದರು.

ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ. ಹಂದಟ್ಟು ಸ್ವಾಗತಿಸಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ನಂತರ ಹಂದಟ್ಟು ಭಾಗದ ರಸ್ತೆ ಇಕ್ಕೆಲ ಮತ್ತು ಹಲವು ಮನೆಗಳಲ್ಲಿ ಗಿಡ ನೆಡಲಾಯಿತು.

Exit mobile version