Site icon Kundapra.com ಕುಂದಾಪ್ರ ಡಾಟ್ ಕಾಂ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಉಡುಪಿ ತಾಲೂಕು ಮಣಿಪಾಲದಲ್ಲಿನ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version