Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ಸಿಎ / ಸಿಎಸ್ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಇಲ್ಲಿನ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ / ಸಿಎಸ್ ಮಾಹಿತಿ ಕಾರ್ಯಕ್ರಮವನ್ನು ಸೋಮವಾರದಂದು ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆಂಟ್  ಎಂದರೇನು?,  ಸಿಎ / ಸಿಎಸ್ ಪಠ್ಯ ಕ್ರಮ, ಶೈಕ್ಷಣಿಕ ಅರ್ಹತೆ, ವಿವಿಧ ಹಂತಗಳ  ಬಗ್ಗೆ ಹಾಗೆಯೇ ಸಿಎ ಎನ್ನುವುದು ಕಠಿಣವಲ್ಲ, ಅದನ್ನು ಸವಾಲಾಗಿ ಸ್ವೀಕರಿಸಿದರೆ  ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು  ಪ್ರೂಫ್‌ ಆಲ್ಬನ್ ಆಂಟನಿ ಪೆರೇರಾ ಸಂಪೂರ್ಣವಾಗಿ ಮಾಹಿತಿ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ಉಪಸ್ಥಿತರಿದ್ದರು.

ಸಂಖ್ಯಾ ಶಾಸ್ತ್ರ ಉಪನ್ಯಾಸಕಿ ವಿದ್ಯಾಶ್ರೀ ಅತಿಥಿಯನ್ನು ಪರಿಚಯಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ  ನಿಧಿ ನಿರೂಪಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕ  ನಾಗೇಶ್ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಶಿವ ರಂಜನಿ ವಂದಿಸಿದರು.

Exit mobile version