Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಗೃಹರಕ್ಷಕದಳ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ 19 ರಿಂದ 45 ವರ್ಷದ ಒಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಜಿಲ್ಲಾ ವ್ಯಾಪ್ತಿಯ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂರವಾಣಿ ಸಂಖ್ಯೆ 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version