Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

ಲೇಖಕರು, ಪ್ರಕಾಶಕರು ಹಾಗೂ ಸಾಹಿತ್ಯಾಸಕ್ತ ಸಾರ್ವಜನಿಕರು ಬಹುಮಾನಕ್ಕಾಗಿ ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟಾರ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜುಲೈ 15 ರ ಒಳಗಾಗಿ ತಲುಪಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version