Site icon Kundapra.com ಕುಂದಾಪ್ರ ಡಾಟ್ ಕಾಂ

ಪರಿಸರ ಉಳಿಸುವಲ್ಲಿ ಕಾರ್ಯ ಪ್ರವೃತ್ತರಾಗೋಣ: ನರೇಂದ್ರ ಎಸ್. ಗಂಗೊಳ್ಳಿ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಪರಿಸರದ ಅಗತ್ಯದ ಬಗ್ಗೆ ಅರಿತುಕೊಳ್ಳುವುದರ ಜೊತೆಗೆ ಪರಿಸರವನ್ನು ಉಳಿಸುವಲ್ಲಿ ನಾವು ಕಾರ್ಯಪ್ರವೃತ್ತರಾದಾಗಲೇ ವಿಶ್ವ ಪರಿಸರ ದಿನಾಚರಣೆಗೆ ಅರ್ಥ ಬರುತ್ತದೆ. ಇದು ನಿರಂತರ ದಿನಾಚರಣೆಯಾಗಬೇಕು ಎಂದು ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯ ಪಟ್ಟರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪರಿಸರ ಸ್ನೇಹಿ ತಂತ್ರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಹೆಸರಿನಲ್ಲಿ ಕನಿಷ್ಟ ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು.

ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ  ದೀಕ್ಷಿತ್ ಮೇಸ್ತ ಸ್ವಾಗತಿಸಿದರು. ಬೋಧಕ  ಬಳಗದ  ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ರೇಣುಕಾ ನಾಯಕ್, ಭೂದೇವಿ, ಮಹಾಬಲ ಆಚಾರ್ಯ ಮತ್ತು ಮಮತಾ ಖಾರ್ವಿ ಉಪಸ್ಥಿತರಿದ್ದರು. ಶಿಕ್ಷಕಿ ಮಾಲಾಶ್ರೀ ಖಾರ್ವಿ ವಂದಿಸಿದರು.

Exit mobile version