ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕೆಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು.
ಶಾಲಾ ಮೇನೆಂಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿದರೆ ಮಾತ್ರ ಹಸಿರನ್ನು ಉಳಿಸಿ ಜೀವ ಸಂಕುಲದ ರಕ್ಷಣೆ ಸಾಧ್ಯ ಎಂದು ತಿಳಿಸಿದರು. ಶಾ
ಲಾ ಪ್ರಾಂಶುಪಾಲರಾದ ನಿತಿನ್ ಡಿʼಆಲ್ಮೇಡಾ ಅವರು ಮಾತನಾಡಿ, ಸಸ್ಯ ಸಂಪತ್ತನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ತಂದ ವಿವಿಧ ಗಿಡಗಳನ್ನು ಶಾಲಾ ವಠಾರದಲ್ಲಿ ನೆಡುವುದರ ಮೂಲಕ ಪರಿಸರದ ಕುರಿತು ಜಾಗೃತಿಯನ್ನು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

