Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಅಂಗನವಾಡಿ ಮಕ್ಕಳಿಗೆ ಪುಸ್ತಕ ವಿತರಣೆ   

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪುಸ್ತಕ ಮತ್ತು ಕಲಿಕಾ ಉಪಕರಣಗಳನ್ನು ಹಾಗೆ ಶಾಲೆಗೆ ಅಡುಗೆ ಕುಕ್ಕರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹನಾ, ಅಡುಗೆ ಸಹಾಯಕಿ ಮೂಕಾಂಬು, ಪೋಷಕರಾದ ಶಾಂತ ಪೈ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ, ಸದಸ್ಯರಾದ ಅನುಷಾ ಯು, ಸವಿತಾ ಖಾರ್ವಿ, ಜ್ಯೋತಿ ಆನಂದ,  ಜ್ಯೋತಿ ಎಂ, ಅಶ್ವಿನಿ ಖಾರ್ವಿ,  ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿಯ ಮುಖ್ಯ ಶಿಕ್ಷಕ ಗುರುರಾಜ್ ಆಚಾರ್ಯ,  ಸಹ ಶಿಕ್ಷಕ ಯೋಗೇಶ್,  ಬಸವೇಶ್ವರ ದೇವಸ್ಥಾನದ ಅರ್ಚಕ ಜಗದೀಶ್, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಮುಖ್ಯಸ್ಥ ಈಶ್ವರ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಪುಷ್ಪಗಳನ್ನು ನೀಡಿ ಸ್ವಾಗತಿಸಲಾಯಿತು.

Exit mobile version