Site icon Kundapra.com ಕುಂದಾಪ್ರ ಡಾಟ್ ಕಾಂ

ರಂಗ ಶಿಕ್ಷಣ ಡಿಪ್ಲೋಮಾ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗಶಾಲೆಯ ಪ್ರಸಕ್ತ ಸಾಲಿನ ರಂಗಶಿಕ್ಷಣ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್) ಪ್ರವೇಶಾತಿಗೆ ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ರಂಗಭೂಮಿಯಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.theatreschoolsanehalli.org ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದ್ದು, ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.

ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಸಂದರ್ಶನವನ್ನು ಜೂನ್ 27 ಮತ್ತು 28 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಶ್ರೀ ಶಿವಕುಮಾರ, ರಂಗ ಪ್ರಯೋಗಶಾಲೆ, ಸಾಣೇಹಳ್ಳಿ, ಹೊಸದುರ್ಗ ತಾಲೂಕು, ಚಿತ್ರದುರ್ಗ ಮೊ.ನಂ: 9448398144, 8861043553 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version