Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿ.ಪ್ರಾ. ಶಾಲೆಯಲ್ಲಿ ಉಚಿತ ಸಮವಸ್ತ್ರ ಮತ್ತು ಬೆಲ್ಟ್ ವಿತರಣೆ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಜಿ. ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ಉಚಿತ ಸಮವಸ್ತ್ರ ಮತ್ತು ಬೆಲ್ಟ್ ಗಳನ್ನು ವಿತರಿಸಲಾಯಿತು.

ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ, ಬೋಧಕ ಬಳಗದ ಲಕ್ಷ್ಮೀ ಖಾರ್ವಿ, ಮಾಲಾಶ್ರೀ ಖಾರ್ವಿ, ರೇಖಾ ಖಾರ್ವಿ, ರೇಣುಕಾ ನಾಯಕ್, ಭೂದೇವಿ, ಮಹಾಬಲ ಆಚಾರ್ಯ ಮತ್ತು ಮಮತಾ ಖಾರ್ವಿ ಉಪಸ್ಥಿತರಿದ್ದರು.

Exit mobile version