Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಬಿಲ್ಲವ ಯುವ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರ  ಮಕ್ಕಳಿಗೆ 10ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವು ಪಾಂಡೇಶ್ವರ ಶಾಲೆಯಲ್ಲಿ ಜರುಗಿತು.

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅನ್ನಪೂರ್ಣ ಹಾಗೂ ಪೂರ್ವಿ ಇವರನ್ನು ಸಂಘದ ಪರವಾಗಿ ಗೌರವಿಸಲಾಯಿತು. 205 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇದಿಕೆಯ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಅಧ್ಯಕ್ಷ ಎಂ. ಸಿ. ಚಂದ್ರಶೇಖರ ಪೂಜಾರಿ, ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ಉದ್ಯಮಿಗಳಾದ ದಯಾನಂದ ಪೂಜಾರಿ ಮೂಡಹಡು ಹಾಗೂ ಗೋಪಾಲ ಪೂಜಾರಿ ಮಠತೋಟ, ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ  ಸುಜಾತಾ ವೆಂಕಟೇಶ್ ಪೂಜಾರಿ ಹಾಗೂ ಬಿಲ್ಲವ ಯುವ ವೇದಿಕೆ ಮಾಜಿ ಅಧ್ಯಕ್ಷ ರವಿ ಪೂಜಾರಿ ಕುದ್ರು ಭಾವಹಿಸಿದ್ದರು.

ಸೀಮಾ ವಿಜಯ್ ಪೂಜಾರಿ ಅತಿಥಿಗಳನ್ನು ಸ್ವಾಗತಿಸಿದರು, ಕಾರ್ಯಕ್ರಮದ ಸಂಯೋಜಕ ಸುರೇಶ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಉಷಾ ಗಣೇಶ್ ಪೂಜಾರಿ ವಂದನಾರ್ಪಣೆ ಸಲ್ಲಿಸಿದರು.

ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ೧೦ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಭಾನುವಾರ ಪಾಂಡೇಶ್ವರ ಶಾಲೆಯಲ್ಲಿ ಜರುಗಿತು. ಶ್ರೀ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಅಧ್ಯಕ್ಷ ಎಂ ಸಿ. ಚಂದ್ರಶೇಖರ ಪೂಜಾರಿ, ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಪ್ರಧಾನ ಕಾರ್ಯದರ್ಶಿ  ಐರೋಡಿ ವಿಠ್ಠಲ್ ಪೂಜಾರಿ ಇದ್ದರು.

ಕೋಟ.ಜೂ.೯ ಬಿಲ್ಲವ ಸಂಘ

Exit mobile version