ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್‌ವೊಂದರಲ್ಲಿ ಖರೀದಿಸಿದ ವಸ್ತುಗಳಿಗೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಎಂದ ಕಾರಣಕ್ಕೆ ಮಹಿಳೆಯೊಬ್ಬರು ಮೆಡಿಕಲ್ ಶಾಪಿನ ಯುವತಿ ಮೇಲೆ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಯಾಸ್ಮಿನ್ ಹಲ್ಲೆಗೈದ ಆರೋಪಿ.
ಮೆಡಿಕಲ್ ಶಾಪಿಗೆ ತೆರಳಿದ್ದ ಯಾಸ್ಮಿನ್ ಔಷಧಿ ಖರೀದಿಸಿ, 500 ರೂ. ಕೊಟ್ಟಿದ್ದರು. ಇದಕ್ಕೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಅಂದಿದ್ದಕ್ಕೆ ಯುವತಿ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಯುವತಿಯನ್ನು ಕುಂದಾಪುರದ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಗೆ ಎಸ್ಪಿ ಭೇಟಿ: ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ, ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆರೋಪಿಯ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮಕೈಗೊಳ್ಳಾಗುವುದು ಎಂದು ಅವರು ಭೇಟಿಯ ವೇಳೆ ತಿಳಿಸಿದ್ದಾರೆ.