Site icon Kundapra.com ಕುಂದಾಪ್ರ ಡಾಟ್ ಕಾಂ

ಪ.ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಹೊಂದಲು ಹಾಗೂ ತರಬೇತಿಯೊಂದಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ Iಊಒ ಹಾಗೂ ಈಅI ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕೆ.ಎಸ್.ಟಿ.ಡಿ.ಸಿ ಸಂಸ್ಥೆಗಳ ಮೂಲಕ ಕನಿಷ್ಠ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನದೊಂದಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿವಿವರ:
ಫುಡ್ ಮತ್ತು ಬೆವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಕನಿಷ್ಟ ಐದನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು, ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿಗೆ ಕನಿಷ್ಠ ದ್ವಿತೀಯ ಪಿ.ಯು.ಸಿ ಉತ್ತೀರ್ಣರಾದ ಅಭ್ಯರ್ಥಿಗಳು, ಎಂಟರ್‌ಪ್ರಿನೋರ್‌ಶಿಪ್ ಪ್ರೋಗ್ರಾಮ್ ಹಾಗೂ ಮೊಬೈಲ್ ಕ್ಯಾಂಟೀನ್ ತರಬೇತಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ karnatakatourism.org, ಸೇವಾಸಿಂಧು ಪೋರ್ಟಲ್ sevasindhu.karnataka.gov.in, ಬಾಪೂಜಿ ಸೇವಾ ಕೇಂದ್ರ bsk.karnataka.gov.in ಅಥವಾ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version