Kundapra.com ಕುಂದಾಪ್ರ ಡಾಟ್ ಕಾಂ

ಬ್ಯಾರಿಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಅವರಿಗೆ ಕವಿ ನಮನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕನ್ನಡದ ಕವಿ ಮತ್ತು ಬರಹಗಾರರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ  ಕನ್ನಡ ಸರಸ್ವತ ಲೋಕಕ್ಕೆ ತಮ್ಮದೇ ಆದ ಚಾಪನ್ನು ಮೂಡಿಸಿರುವ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿಯವರಿಗೆ ಭಾವಪೂರಕವಾಗಿ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಪಾರ ಕೊಡುಗೆಯನ್ನು, ನಮ್ಮನ್ನು ಅಗಲಿದ ಎಚ್ ಎಸ್ ವೆಂಕಟೇಶ್ ಮೂರ್ತಿ ಅವರ ಸಾಧನೆಯನ್ನು ಕುರಿತು ಬಿಇಡಿ ಪ್ರಶಿಕ್ಷಣಾರ್ಥಿಗಳು ಮಾತನಾಡಿದರು. ಇನ್ನು ಕೆಲವು ವಿದ್ಯಾರ್ಥಿಗಳು ಅವರು ರಚಿಸಿದ ಭಾವಗೀತೆಗಳನ್ನು ಹಾಡುವ ಮೂಲಕ ಗೀತ ಗೌರವವನ್ನೂ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಿದ್ದಪ್ಪ ಕೆ. ಎಸ್. ಅವರು ಭಾಗವಹಿಸಿ ಮಾತನಾಡಿ, ಮರಣಿಸಿರುವ ವ್ಯಕ್ತಿಗಳನ್ನು ಅಂದರೆ ಸಾಧಕರನ್ನು ಸ್ಮರಿಸಿಕೊಳ್ಳಬೇಕು ಅವರ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರಿಸ್ ಸಮೂಹ ಶಿಕ್ಷಣದ ಅಧ್ಯಕ್ಷರು ಆದ ಅಬ್ದುಲ್ ರೆಹಮಾನ್ ಅವರು ವಹಿಸಿದ್ದರು.

ಪ್ರವೀಣ್ ಕುಮಾರ್ ಕೆಪಿ ಉಪ ಪ್ರಾಂಶುಪಾಲರು ಮತ್ತು ದಾಖಲಾತಿ ಅಧಿಕಾರಿಗಳು, ಡಾಕ್ಟರ್ ಫಿರ್ದೋಸ್ ಡಿಎಡ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಂಸ್ಥೆಯ ಎಲ್ಲಾ ಸಹಾಯಕ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅನಂತ್ ಭಟ್ ಸಹಾಯಕ ಪ್ರಾಧ್ಯಾಪಕರು ಪ್ರಸ್ತಾವಿಕ ನುಡಿಗಳನಾಡಿದರು. ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ, ದ್ವಿತೀಯ ಬಿ.ಇಡಿ ಪ್ರಶಿಕ್ಷಣಾರ್ಥಿಯಾದ ಅನಿತಾ ಸ್ವಾಗತಿಸಿ, ಪೂಜಾ ವಂದಿಸಿದರು.

Exit mobile version