Kundapra.com ಕುಂದಾಪ್ರ ಡಾಟ್ ಕಾಂ

ಕೇಂದ್ರ ಸರಕಾರದ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಿಳಿಯುವಂತಾಗಬೇಕು: ಸಂಸದ ಕೋಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸೇವೆ ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣದ ಮೋದಿ ಸರ್ಕಾರದ 11ನೇ ವರ್ಷ ಆಚರಣೆಯ ಅಂಗವಾಗಿ ಕುಂದಾಪುರದ ಬಿಜೆಪಿ ಕಾರ್ಯಾಲಯದಲ್ಲಿ ಕುಂದಾಪುರ ಕ್ಷೇತ್ರ ಮಟ್ಟದ ಕಾರ್ಯಗಾರ ನಡೆಯಿತು.

ಕಾರ್ಯಗಾರ ಆರಂಭಕ್ಕೂ ಮುನ್ನ ಗುಜರಾತ್ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರನ್ನು ಒಂದು ನಿಮಿಷಗಳ ಕಾಲ ಮೌನ ಆಚರಣೆ ನಡೆಸಿದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ  ಶ್ರೀನಿವಾಸ್ ಪೂಜಾರಿ ಅವರು ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತನ್ನ 11 ವರ್ಷ ಆಡಳಿತವನ್ನು ಪೂರ್ಣಗೊಳಿಸಿದ್ದು, ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳು ಕೂಡ ನಡೆಯುತ್ತಿದ್ದು ಈ ಯೋಜನೆ ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಉದ್ದೇಶ ಈ ಕಾರ್ಯಗಾರ ಎಂದು ಕೇಂದ್ರ ಸರಕಾರದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗಳಿಗೆ ಮಾಹಿತಿ ನೀಡಿ, ಸಮರ್ಪಕವಾಗಿ ಯೋಜನೆ ತಲುಪುವಂತಾಗಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದ್ದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು.

ಮೋದಿಜಿ ನೇತೃತ್ವದ 11ನೇ ವರ್ಷದ ಸಾಧನೆಯನ್ನು ಮನೆಮನೆಗಳಿಗೆ ತಲುಪಿಸುವ ಕಾರ್ಯಕ್ರಮದ  ಸಂಚಾಲಕರಾದ ಸಂಧ್ಯಾ ರಮೇಶ್ ಅವರು ಮಾತನಾಡಿ ಕಾರ್ಯಕ್ರಮದ ಸಮಗ್ರ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದ ವೇದಿಕೆಯಲ್ಲಿ ಮೋದಿ ಮಿತೃತ್ವದ 11ನೇ ವರ್ಷದ ಸಾಧನೆಯನ್ನು ಮನೆಮನೆಗಳಿಗೆ ತಲುಪಿಸುವ ಕಾರ್ಯಕ್ರಮದ ಕುಂದಾಪುರ ಮಂಡಲದ ಸಂಚಾಲಕರಾದ ಸುನಿಲ್ ಶೆಟ್ಟಿ ಹೇರಿಕುದ್ರು, ರಾಜೇಶ್ ಹಾಗೂ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಉಪಸಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮವನ್ನು ನಿರೂಪಿಸಿ,  ಸುಧೀರ್ ಕೆ.ಎಸ್. ಸರ್ವರನ್ನು ಸ್ವಾಗತಿಸಿ ವಂದಿಸಿದರು.

Exit mobile version