ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ರಿ. ಅಭಿಯೋಗ ಇಲಾಖೆ, ತಾಲೂಕು ಆಡಳಿತ ಹಾಗೂ ಕಾರ್ಮಿಕ ಇಲಾಖೆ ಕುಂದಾಪುರ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು.
ಕುಂದಾಪುರದ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಮತ್ತು ನ್ಯಾಯಿಕ ದಂಡಾಧಿಕಾರಿಗಳಾದ ಶ್ರುತಿ ಶ್ರೀ. ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನೀವು ವಾಸಿಸುಸುತ್ತಿರುವ ಸುತ್ತ ಮುತ್ತಲಿನ ಪ್ರದೇಶದಲ್ಲಿ ಯಾವುದೇ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಪೋಷಕರಿಗೆ ಮತ್ತು ಮಾಲೀಕರಿಗೆ ತಿಳಿವಳಿಕೆಯನ್ನು ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸುವಂತೆ ಪ್ರೇರೇಪಿಸಿ ಹಾಗೂ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆ ಕುರಿತು ಸಂಪೂರ್ಣ ವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು.
ವೇದಿಕೆಯಲ್ಲಿ ಕುಂದಾಪುರದ ಉಪ ತಹಶೀಲ್ದಾರರಾದ ಮಲ್ಲಿಕಾರ್ಜುನ, ವಕೀಲರ ಸಂಘದ ಅಧ್ಯಕ್ಷರಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಸಹಾಯಕ ಸರಕಾರಿ ಅಭಿಯೋಜಕರಾದ ಉದಯಕುಮಾರ್ ಬಿಎ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಕಾರ್ಮಿಕ ನಿರೀಕ್ಷಕರಾದ ವಿಜೇಂದ್ರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಉಪರಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಶ್ರೀ ವೆಂಕಟರಮಣ ಸಂಸ್ಥೆಯ ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಮುಖ್ಯೋಪಾಧ್ಯಯರಾದ ಕೃಷ್ಣ ಅಡಿಗ ಸ್ವಾಗತಿಸಿ, ಕಾರ್ಮಿಕ ನಿರೀಕ್ಷಕರಾದ ವಿಜೇಂದ್ರ ವಂದಿಸಿದರು.

