Site icon Kundapra.com ಕುಂದಾಪ್ರ ಡಾಟ್ ಕಾಂ

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ:
ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ  ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು.

ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ ಹಾಗೂ ಪೃಥ್ವಿಚಾರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು.

ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ – ಸಂಪ್ರದಾಯಿಕ ಯೋಗಾಸನ ಹಾಗೂ ಅನನ್ಯ ಗುರವ್ – ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾ? ಕೊಡ್ಲಿಕರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು. 

ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Exit mobile version