ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು, ಜೂ.14: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಗೃಹ ಸಚಿವರನ್ನು ದೇವರದ ವತಿಯಿಂದ ಶಾಲುವದಿಸಿ ದೇವಿಯ ಪ್ರಸಾದ ನೀಡಿ ಗೌರವಿಸಿದರು.

ಈ ವೇಳೆ ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯ , ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಂ.ಎ.ಗಪೂರ್, ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಾಬು ಹೆಗ್ಡೆ ತಗ್ಗರ್ಸೆ, ಸಮಿತಿಯ ಸದಸ್ಯರಾದ ಅಭಿಲಾಷ್ ಪಿ.ವಿ, ಮಹಾಲಿಂಗ ನಾಯ್ಕ್, ಸುರೇಂದ್ರ ಶೆಟ್ಟಿ, ರಘುರಾಮ ದೇವಾಡಿಗ, ಸುಧಾ ಕೆ, ಧನಾಕ್ಷಿ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.