Site icon Kundapra.com ಕುಂದಾಪ್ರ ಡಾಟ್ ಕಾಂ

ಜೂ.16ರಂದು ಉಡುಪಿ ಜಿಲ್ಲೆಯಲ್ಲಿ ಮಳೆ ಪರಿಸ್ಥಿತಿ ಅವಲೋಕಿಸಿ ಶಾಲೆಗೆ ರಜೆ. ಶಾಲಾಡಳಿತಕ್ಕೆ ರಜೆ ಘೋಷಿಸುವ ಹೊಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ,ಜೂ.15:
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಉಡುಪಿಯಲ್ಲಿ ಶನಿವಾರ ಸರಾಸರಿ 60 ಮಿ.ಮೀ ಮಳೆ ದಾಖಲಾಗಿದೆ. ಇನ್ನು ಜೂನ್.16ರ ಸೋಮವಾರ ಶಾಲೆಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಲಾಗಿಲ್ಲ. ಆದರೆ ಆಯಾ ಊರಿನ ಪರಿಸ್ಥಿತಿಗೆ ಅನುಗುಣವಾಗಿ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸುವ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಭಾನುವಾರ ರಾತ್ರಿ ರೆಡ್ ಅಲರ್ಟ್ ಇದ್ದು ಸೋಮವಾರ ಬೆಳಿಗ್ಗೆ ಆರೆಂಜ ಅಲರ್ಟ್ ಇರುವುದರಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುತ್ತಿಲ್ಲ. ಆದರೆ ಮಕ್ಕಳ ಸುರಕ್ಷತೆ ಅತ್ಯಂತ ಮಹತ್ವದ್ದು. ಯಾವುದೇ ನಿರ್ಲಕ್ಷ ಮಾಡುವಂತಿಲ್ಲ. ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸಬಹುದಾಗಿದೆ. ಶಾಲೆಗೆ ರಜೆಯನ್ನು ನೀಡಿದ ವಿಷಯ ವಿದ್ಯಾರ್ಥಿಗಳಿಗೆ ತಿಳಿಯದೇ ವಿದ್ಯಾರ್ಥಿಗಳು ಶಾಲೆಗೆ ಬರುವ ಸಾಧ್ಯತೆಗಳು ಇದ್ದಲ್ಲಿ  ಶಾಲೆಯಲ್ಲಿ ಒಬ್ಬರಾದರೂ ಶಿಕ್ಷಕರಿದ್ದು ಅವರು ಅಂತಹ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಕ್ರಮವನ್ನು ವಹಿಸಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ಕಳೆದ ನಾಲ್ಕುದು ದಿನಗಳಿಂದ ರೆಡ್‌ ಅಲರ್ಟ್‌ ಇದ್ದುದರಿಂದ ಗುರುವಾರ ಹಾಗೂ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಶನಿವಾರ ಮಳೆ ಕಡಿಮೆಯಿದ್ದುದರಿಂದ ಎಂದಿನಂತೆ ತರಗತಿಗಳು ನಡೆದಿದ್ದವು. ಸೋಮವಾರ ಆರೆಂಜ್‌ ಅಲರ್ಟ್‌ ಇದ್ದುದರಿಂದ ಜಿಲ್ಲಾಡಳಿತ ನೇರವಾಗಿ ರಜೆ ಘೋಷಿಸದೇ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಜೆ ಘೋಷಿಸುವ ನಿರ್ಧಾರವನ್ನು ಶಾಲಾಡಳಿತಕ್ಕೆ ಬಿಟ್ಟಿದೆ.

Exit mobile version