Site icon Kundapra.com ಕುಂದಾಪ್ರ ಡಾಟ್ ಕಾಂ

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ
: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-3 ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1 ರ (ಎ) ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾಒðಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಒಕ್ಕಲಿಗ, ದಾಸ್‌ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ/ ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರö್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ ತಂತ್ರಾಂಶದ ವೆಬ್‌ಸೈಟ್ https://www.kaushalkar.com/ ನಲ್ಲಿ ಆನ್‌ಲೈನ್ ಮೂಲಕ ಜುಲೈ 2 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdc.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-29904350, 29904268 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version