Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಗಂಗೋತ್ರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

oplus_0

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಮಹಿಳೆ ಸ್ವಾವಲಂಬಿಯಾಗಿ ಜೀವನ ನಡೆಸುವಂತಾಗಬೇಕೆಂಬ. ಉದ್ದೇಶದಿಂದ ಆದಾಯಯುಕ್ತ ಚಟುವಟಿಕೆಗಳನ್ನು ನಡೆಸಲು ತರಬೇತಿ, ಸಹಾಯಧನ ಒದಗಿಸಿ ಸ್ವ ಉದ್ಯೋಗ ಮಾಡಲು ಸರಕಾರ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು.

ಅವರು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಗಂಗೋತ್ರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಸರಕಾರದ ಯೋಜನೆಗಳ ಸದ್ಭಳಕೆ ಮಾಡಿಕೊಳ್ಳಬೇಕು, ಸ್ವ ಉದ್ಯೋಗಕ್ಕೆ  ದೊರಕಿದ ಸಹಾಯಧನವನ್ನು ನ್ಯಾಯವಾಗಿ ಬಳಸಿಕೊಂಡು ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು

ಒಕ್ಕೂಟದ ಅಧ್ಯಕ್ಷೆ ಕಮಲ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಪಿಡಿಒ ಶೋಭಾ ಎಸ್., ಕಾರ್ಯದರ್ಶಿ ಅನೂಪ್ ಶೇಟ್, ಚಿತ್ತಾರ ಸಂಜೀವಿನಿ ತಾಲೂಕು ಒಕ್ಕೂಟದ ಕಾರ್ಯದರ್ಶಿ ನಾಗರತ್ನ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಪಶು ವೈದ್ಯಾಧಿಕಾರಿ ಡಾ. ಅರುಣ್ ಕೆ.ಪಿ., ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಎಚ್‌ಒ ನಯನಾ ತಾಂಡೇಲ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷ, ಕೆನರಾ ಬ್ಯಾಂಕಿನ ಪ್ರತಿನಿಧಿ ಆಶಾಲತಾ, ಎನ್‌ಎಲ್‌ಆರ್‌ಎಂ ಕುಂದಾಪುರ ತಾಲೂಕು ಪಂಚಾಯತ್‌ನ ಚೈತ್ರ, ರೇಷ್ಮಾ ಮಾಹಿತಿ ನೀಡಿದರು.

ಅತ್ಯುತ್ತಮ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಒಕ್ಕೂಟದ

ಪದಾಧಿಕಾರಿಗಳು, ಎಂಬಿಕೆ, ಎಲ್‌ಸಿಆರ್‌ಪಿ, ಕೃಷಿ ಸಖಿ, ಪಶು ಸಖಿ ಮತ್ತಿತರರು ಉಪಸ್ಥಿತರಿದ್ದರು.

ರೇಖಾ ಖಾರ್ವಿ ಸ್ವಾಗತಿಸಿದರು. ಶಾಂತಾ ಆಯವ್ಯಯ ಮಂಡಿಸಿದರು. ಒಕ್ಕೂಟದ ಕಾರ್ಯದರ್ಶಿ ಶೋಭಾ ಎಸ್. ಬಿಲ್ಲವ ವರದಿ ವಾಚಿಸಿದರು. ಪೂರ್ಣಿಮಾ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version