Site icon Kundapra.com ಕುಂದಾಪ್ರ ಡಾಟ್ ಕಾಂ

ನೀಟ್ ಫಲಿತಾಂಶ: ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ‌ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525, ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version