Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ. ಕೆ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ,ಜೂ.18:
ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.

Exit mobile version