Site icon Kundapra.com ಕುಂದಾಪ್ರ ಡಾಟ್ ಕಾಂ

ರೋಟರಿ ಕ್ಲಬ್ ಬೈಂದೂರು: 2025- 26ನೇ ಸಾಲಿನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಜಿ ಉಪ್ಪುಂದ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
42 ವರ್ಷಗಳ ಸುದೀರ್ಘ ಇತಿಹಾಸ ಇರುವ ಪ್ರತಿಷ್ಠಿತ ಬೈಂದೂರು ರೋಟರಿ ಕ್ಲಬ್ ನ 2025- 26ನೇ ಸಾಲಿನ ಅಧ್ಯಕ್ಷರಾಗಿ ಶಿಕ್ಷಕ ಹಾಗೂ ರಂಗಭೂಮಿ ಕಲಾವಿದರಾದ ಸುಬ್ರಮಣ್ಯ ಜಿ. ಉಪ್ಪುಂದ ಆಯ್ಕೆಯಾದರು.

ಉತ್ತಮ ಸಂಘಟಕರೂ ಆಗಿರುವ ಸುಬ್ರಹ್ಮಣ್ಯ ಜಿ ಅವರು ಉಪ್ಪುಂದ ಜೆಸಿಐ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ರೋಟರಿ ಕಾರ್ಯದರ್ಶಿಯಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾದರು. ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜುಲೈ 9 ರಂದು ರೋಟರಿ ಸಮುದಾಯ ಭವನ ಬೈಂದೂರು ಇಲ್ಲಿ ನಡೆಯಲಿದೆ

Exit mobile version