Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಂದ ಪತಿ – ಆರೋಪಿ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಹೊಡೆದು ಕೊಂದು ಪತಿ ಓಡಿ ಹೋದ ಘಟನೆ ಗುರುವಾರ ತಡರಾತ್ರಿ ತಾಲೂಕಿನ ಹಿಲಿಯಾಣ ಎಂಬಲ್ಲಿ ನಡೆದಿದೆ. ಇಲ್ಲಿನ ದರ್ಕಾಸು ನಿವಾಸಿ ಗಣೇಶ್ ಪೂಜಾರಿ (43) ಎಂಬಾತನೇ ಪತ್ನಿಯನ್ನು ಕೊಂದ ಆರೋಪಿ. ಗಣೇಶ್ ಪೂಜಾರಿ ಪತ್ನಿ ರೇಖಾ ಪೂಜಾರಿ (26) ಪತಿಯಿಂದ ಕೊಲೆಯಾದ ದುರ್ದೈವಿ.

ಗುರುವಾರ ತಡರಾತ್ರಿ ಮನೆಗೆ ಬಂದ ಗಣೇಶ್‌, ಹೆಂಡತಿಯೊಂದಿಗೆ ತಕರಾರು ತೆಗೆದು ಗಲಾಟೆ ನಡೆಸಿ ಮಾತಿಗೆ ಮಾತು ಬೆಳೆದು ಸಿಟ್ಟುಗೊಂಡು ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಗಣೇಶ್ ಪೂಜಾರಿ ಹೊಡೆದಿದ್ದು ತಲೆಗೆ ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಕೊಲೆ ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಶಂಕರನಾರಾಯಣ ಪೊಲೀಸರು ಹುಡುಕಾಡಿ ಕೊನೆಗೆ ಶಂಕರನಾರಾಯಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಗಣೇಶ್ ಪೂಜಾರಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ. ದಂಪತಿಗಳಿಗೆ ಒಬ್ಬ 6 ವರ್ಷ ಮತ್ತು ಇನ್ನೊಬ್ಬ 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version