ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಜ್ಜರಕಾಡಿನಲ್ಲಿರುವ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಲಸಿಕೆ ಉಗ್ರಾಣ ನೂತನ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.
ಶಾಸಕ ಯಶಪಾಲ್ ಸುವರ್ಣ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿ ಕಾರಿ ಸ್ವರೂಪ ಟಿ.ಕೆ., ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಪ್ರತೀಕ್ ಬಾಯಲ್, ಡಿಎಚ್‌ಒ ಡಾ.ಬಸವರಾಜ್ ಹುಬ್ಬಳ್ಳಿ ಉಪಸ್ಥಿತರಿದ್ದರು.

