ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜೂ.21: ಬೈಂದೂರು ಮಂಡಲ ಬಿಜೆಪಿ ಹಾಲಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಅವರು ಸಲ್ಲಿಸಲಾಗಿದ್ದ ರಾಜೀನಾಮೆ ಪತ್ರವನ್ನು ಜಿಲ್ಲಾಧ್ಯಕ್ಷರು ಶನಿವಾರ ಅಂಗೀಕರಿಸಿದ್ದಾರೆ.
ಕಳೆದ 5 ವರ್ಷಗಳಿಂದ ಮಂಡಲ ಅಧ್ಯಕ್ಷ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಿದ್ದೇನೆ. ಸಂಘಟನಾ ಪರ್ವ ನಡೆಯುತ್ತಿರುವ ಈ ಸಂದರ್ಭದಲ್ಲಿ ಪಕ್ಷದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಬೇಕಾಗಿರುವುದರಿಂದ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಹೊಸ ನಾಯಕತ್ವಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಜೀನಾಮೆಯನ್ನು ಅಂಗೀಕರಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ದೀಪಕ್ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸಿ, ನೂತನ ಅಧ್ಯಕ್ಷರನ್ನು ಶೀಘ್ರವಾಗಿ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ.
ದೀಪಕ್ ಕುಮಾರ್ ಶೆಟ್ಟಿ ಅವರು ಬೈಂದೂರು ಮಂಡಲ ಬಿಜೆಪಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಮುಂದುವರಿದಿದ್ದರು.