Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಮಂಡಲ ಬಿಜೆಪಿ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ. ನೇಮಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು,ಜೂ.21:
ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರನ್ನಾಗಿ ಅನಿತಾ ಆರ್.ಕೆ. ಅವರನ್ನು ಆಯ್ಕೆಮಾಡಲಾಗಿದೆ.

ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ತಕ್ಷಣವೇ ಅನಿತಾ ಆರ್.ಕೆ. ಅವರನ್ನು ನೇಮಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಬಗ್ಗೆ ಬಿಜೆಪಿ ಸಂಘಟನಾ ಪರ್ವದ ಜಿಲ್ಲಾ ಚುಣಾವಣಾಧಿಕಾರಿ ರವಿಶಂಕರ್‌ ಮಿಜಾರು ಪ್ರಕಟಣೆ ಹೊರಟಿಸಿದ್ದಾರೆ.

ಅನಿತಾ ಅವರ ಈ ಹಿಂದೆ ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಮರವಂತೆ ಪಂಚಾಯತ್‌ ಅಧ್ಯಕ್ಷರಾಗಿಯೂ ಒಂದು ಅವಧಿಗೆ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ
► ಬೈಂದೂರು ಮಂಡಲ ಬಿಜೆಪಿ ಹಾಲಿ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ ರಾಜೀನಾಮೆ – https://kundapraa.com/?p=86500 .

Exit mobile version