ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ತಾಲೂಕಿನ ಅಂಪಾರು ಮೂಡುಬಗೆಯ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಶಾಲಾಬ್ಯಾಗ್, ಕೊಡೆ ಮತ್ತು ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸ್ವಯಂಸ್ಫೂರ್ತಿ ಫೌಂಡೇಶನ್ ತಂಡವು ಮಕ್ಕಳಿಗೆ ಶಿಕ್ಷಣಕ್ಕೆ ಅಗತ್ಯವಿರುವ ವಸ್ತುಗಳನ್ನು ನೀಡಿ ಸಹಕರಿಸಿದ್ದಾರೆ ಇವರ ಸೇವೆ ಅಮೂಲ್ಯವಾದದು ಎಂದರು.
ಸ್ವಯಂಸ್ಫೂರ್ತಿ ಫೌಂಡೇಶನ್ ಪ್ರವರ್ತಕ ನಾಗರಾಜ ಶೆಟ್ಟಿ ಜಡ್ಕಲ್, ಶಾಲೆಯ ಮುಖ್ಯೋಪಧ್ಯಾಯ ರವೀಂದ್ರ ದೇವಾಡಿಗ, ಶಾಲಾ ಶಿಕ್ಷಕರು ಹಾಗೂ ಸ್ವಯಂಸ್ಪೂರ್ತಿ ತಂಡದ ಸದಸ್ಯರು ಉಪಸ್ಥಿತರಿದ್ದರು.