ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024 ನೇ ಸಾಲಿನ Tenzing Norjy National Adventure (T.N.N.A.A) ಪ್ರಶಸ್ತಿಗಾಗಿ 2022 ರಿಂದ 2024 ನೇ ಸಾಲಿನ ವರೆಗೆ ಜಲಸಾಹಸ, ವಾಯುಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://awards.gov.in/ ಅಥವಾ ಉಚಿತ ಸಹಾಯವಾಣಿ ಸಂಖ್ಯೆ: 01123386898 ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
