Site icon Kundapra.com ಕುಂದಾಪ್ರ ಡಾಟ್ ಕಾಂ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಮಾತನಾಡಿ, ಯೋಗದ ಮಹತ್ವವನ್ನು ಸಾರುತ್ತ ಪ್ರತಿಯೊಬ್ಬರು ಯೋಗವನ್ನು ಕಲಿತು ಆರೋಗ್ಯಕರ ಜೀವನದ ಕಡೆಗೆ ಹೆಚ್ಚು ಹಾಕಬೇಕು ಎಂದರು.

ಜನತಾ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಸಿದರು. ಕಾಲೇಜಿನ ರಾಷ್ಟ್ರಮಟ್ಟದ ಯೋಗಪಟು ನಿರೀಕ್ಷಾ ಹಾಗೂ ಸಾನಿಧ್ಯಾ ಎಸ್. ಮೊಗವೀರ  ಮತ್ತು ವಂಶಿತ್ (7ನೇ ತರಗತಿ) ಯೋಗ ನೃತ್ಯವನ್ನು ಪ್ರದರ್ಶಿಸಿದರು. ಡ್ರಾಮಾ ಜೂನಿಯರ್ ಖ್ಯಾತಿಯ ಸಿಂಚನ ಕೋಟೇಶ್ವರ (ಪ್ರಥಮ ಪಿಯುಸಿ) ಅವರಿಂದ ಡ್ರಾಮಾ ಪ್ರದರ್ಶನ ನಡೆಯಿತು.

ಕಾರ್ಯಕ್ರಮದಲ್ಲಿ ಜನತಾ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ  ವೃಂದದವರು  ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯೋಗ ಶಿಕ್ಷಕಿಯಾದ ಅನ್ವಿತಾ ನಿರೂಪಿಸಿ, ಸ್ವಾಗತಿಸಿ, ಸಮಾಜ ವಿಜ್ಞಾನ ಶಿಕ್ಷಕರಾದ ಸುಬ್ರಹ್ಮಣ್ಯ ಮರಾಟಿ  ವಂದಿಸಿದರು.

Exit mobile version