ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ (ಸಿ.ಇ.ಟಿ ಹಾಗೂ ನೀಟ್ ಕೌನ್ಸಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು) ಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ವೆಬ್‌ಸೈಟ್ https://kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
