ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಂಗಳವಾರ ಭೇಟಿ ನೀಡಿ, ಶ್ರೀ ದೇವಿಯ ದರ್ಶನ ಪಡೆದರು.
ಅರ್ಚಕರಾದ ಡಾ. ಕೆ.ಎನ್‌ನರಸಿಂಹ ಅಡಿಗ ಹಾಗೂ ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ವಿಷೇಶ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು.
ಈ ವೇಳೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಅಭಯಚಂದ್ರ ಜೈನ್, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ್ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಪ್ರಸಾದರಾಜ್ ಕಾಂಚನ್, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ರಾಜು ಪೂಜಾರಿ ಹಾಗೂ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

