Kundapra.com ಕುಂದಾಪ್ರ ಡಾಟ್ ಕಾಂ

ಫಾರ್ಮಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಹೊಂದಿದ ಎನ್. ವಿಶ್ವನಾಥ ನಾಯಕ್ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಫಾರ್ಮಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಹೊಂದಿದ ಎನ್.ವಿಶ್ವನಾಥ ನಾಯಕ್ ಅವರನ್ನು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ಬೀಳ್ಕೊಡಲಾಯಿತು.

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅಮಿತಾ ಅವರು ವಿಶ್ವನಾಥ ನಾಯಕ್ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಆಸ್ಪತ್ರೆಯ ಸಿಎಚ್‌ಒ ಗಳಾದ ನಯನಾ ತಾಂಡೇಲ, ರಕ್ಷಿತಾ, ಹರಿಣಾಕ್ಷಿ ಮತ್ತು ನಯನಾ, ಶುಶ್ರೂಷಕಿಯರಾದ ಶೋಭಾ ಕೆ., ಸುಜಾತಾ ಎನ್., ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

Exit mobile version